Mark 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
Kannada BSI Bible 2016
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.
Kannada Bible (KNCL) BSI 2016
ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.