Mark 3:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
Kannada BSI Bible 2016
ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
Kannada Bible (KNCL) BSI 2016
ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.