Mark 3:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
Kannada BSI Bible 2016
ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಆತನ ಸುತ್ತಲು ಕೂತುಕೊಂಡಿದ್ದಾಗ ಆತನ ತಾಯಿಯೂ ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇ ಕಳುಹಿಸಿದರು.
Kannada Bible (KNCL) BSI 2016
ಯೇಸುಸ್ವಾಮಿಯ ತಾಯಿ ಮತ್ತು ಸಹೋದರರು ಅಲ್ಲಿಗೆ ಬಂದರು. ಒಳಗೆ ಜನರು ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದರು. ಆದುದರಿಂದ ಅವರು ಹೊರಗೇ ನಿಂತು, ಯೇಸುವಿಗೆ ಬರಬೇಕೆಂದು ಹೇಳಿಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.