Mark 3:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
Kannada BSI Bible 2016
ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿರುತ್ತಾರೆ ನೋಡು ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
“ನಿಮ್ಮ ತಾಯಿಯೂ ಸಹೋದರರೂ ಹೊರಗೆ ನಿಮಗಾಗಿ ಕಾದಿದ್ದಾರೆ,” ಎಂದು ಯೇಸುವಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು.