Mark 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
Kannada BSI Bible 2016
ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು.
Kannada Bible (KNCL) BSI 2016
“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.