Mark 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
Kannada BSI Bible 2016
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.
Kannada Bible (KNCL) BSI 2016
ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.