Mark 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
Kannada BSI Bible 2016
ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
Kannada Bible (KNCL) BSI 2016
ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.