Mark 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
Kannada BSI Bible 2016
ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.