Mark 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
Kannada BSI Bible 2016
ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
Kannada Bible (KNCL) BSI 2016
ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.