Mark 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
Kannada BSI Bible 2016
ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.
Kannada Bible (KNCL) BSI 2016
ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.