Mark 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
Kannada BSI Bible 2016
ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;
Kannada Bible (KNCL) BSI 2016
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.