Mark 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ತನ್ನ ಶಿಷ್ಯರಿಗೆ, “ನಿಮಗೆ ಈ ಸಾಮ್ಯ ಅರ್ಥವಾಯಿತೇ? ನೀವು ಇದನ್ನೇ ಅರ್ಥಮಾಡಿಕೊಳ್ಳದಿದ್ದರೆ ಬೇರೆ ಯಾವ ಸಾಮ್ಯವನ್ನು ಅರ್ಥಮಾಡಿಕೊಳ್ಳುವಿರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?
Kannada BSI Bible 2016
ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?