Mark 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
Kannada BSI Bible 2016
ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು.
Kannada Bible (KNCL) BSI 2016
ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.