Mark 4:17 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Kannada BSI Bible 2016
ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
Kannada Bible (KNCL) BSI 2016
ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.