Mark 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
Kannada BSI Bible 2016
ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು.
Kannada Bible (KNCL) BSI 2016
ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.