Mark 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
Kannada BSI Bible 2016
ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಅವರಿಗೆ - ದೀಪವನ್ನು ತಂದು ಕೊಳಗದೊಳಗಾಗಲಿ ಮಂಚದ ಕೆಳಗಾಗಲಿ ಇಡುವದುಂಟೇ? ದೀಪಸ್ತಂಭದ ಮೇಲೆ ಇಡುತ್ತಾರಲ್ಲಾ?
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.