Mark 4:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
Kannada BSI Bible 2016
ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರಕೊಂಡುಹೋದರು.
Kannada Bible (KNCL) BSI 2016
ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.