Mark 4:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
Kannada BSI Bible 2016
ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ತೆರೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವದಕ್ಕೆ ಬಂದಿತ್ತು.
Kannada Bible (KNCL) BSI 2016
ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.