Mark 4:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
Kannada BSI Bible 2016
ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು
Kannada Bible (KNCL) BSI 2016
ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.