Mark 4:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.