Mark 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
Kannada BSI Bible 2016
ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಹುಟ್ಟಿ ಬೆಳೆಯುತ್ತಾ ಬಂದು ಒಂದು ಮೂವತ್ತರಷ್ಟು, ಒಂದು ಅರುವತ್ತರಷ್ಟು,
Kannada Bible (KNCL) BSI 2016
ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”