Mark 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
Kannada BSI Bible 2016
ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.
Kannada Bible (KNCL) BSI 2016
ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.