Mark 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
Kannada BSI Bible 2016
ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು,
Kannada Bible (KNCL) BSI 2016
ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.