Mark 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
Kannada BSI Bible 2016
ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದರೆ ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟಿದ್ದವನು, ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಕೂತಿರುವದನ್ನು ನೋಡಿ ಹೆದರಿದರು.
Kannada Bible (KNCL) BSI 2016
ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.