Mark 5:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
Kannada BSI Bible 2016
ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಹೀಗೆ ಹೀಗಾಯಿತೆಂಬದನ್ನೂ ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಲು
Kannada Bible (KNCL) BSI 2016
ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.