Mark 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
Kannada BSI Bible 2016
ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೋಣಿಯನ್ನು ಹತ್ತುವಾಗ ಆ ದೆವ್ವಹಿಡಿದಿದ್ದವನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು.
Kannada Bible (KNCL) BSI 2016
ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.