Mark 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
Kannada BSI Bible 2016
ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಅವನನ್ನು ಇರಗೊಡದೆ ಅವನಿಗೆ - ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಸ್ವಾವಿುಯು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು ಅಂದನು.
Kannada Bible (KNCL) BSI 2016
ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.