Mark 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
Kannada BSI Bible 2016
ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು.
Kannada Bible (KNCL) BSI 2016
ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.