Mark 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
Kannada BSI Bible 2016
ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
Kannada Bible (KNCL) BSI 2016
ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.