Mark 5:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
Kannada BSI Bible 2016
ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತಿರಿಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
Kannada Bible (KNCL) BSI 2016
ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.