Mark 5:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Kannada BSI Bible 2016
ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Kannada Bible (KNCL) BSI 2016
ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.