Mark 5:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
Kannada BSI Bible 2016
ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.
Kannada Bible (KNCL) BSI 2016
ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.