Mark 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
Kannada BSI Bible 2016
ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.
Kannada Bible (KNCL) BSI 2016
ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.