Mark 5:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
Kannada BSI Bible 2016
ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು.
Kannada Bible (KNCL) BSI 2016
ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.