Mark 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು. ಅವನನ್ನು ಕಟ್ಟಿಹಾಕಲು ಯಾರಿಗೂ ಸಾಧ್ಯವಿರಲಿಲ್ಲ. ಅವನನ್ನು ಸರಪಣಿಗಳಿಂದ ಕಟ್ಟಿದರೂ ಪ್ರಯೋಜನವಾಗುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
Kannada BSI Bible 2016
ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಸಮಾಧಿಯ ಗವಿಗಳೇ ವಾಸಸ್ಥಳವಾಗಿದ್ದವು. ಅವನನ್ನು ಅನೇಕಸಾರಿ ಬೇಡಿಗಳಿಂದಲೂ ಸರಪಣಿಗಳಿಂದಲೂ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ಮುರಿದುಹಾಕಿದ್ದನು; ಅವನನ್ನು ಇನ್ನು ಯಾರೂ ಸರಪಣಿಯಿಂದಾದರೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವದಕ್ಕೆ ಯಾರಿಂದಲೂ ಆಗಲಿಲ್ಲ.
Kannada Bible (KNCL) BSI 2016
ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.