Mark 5:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
Kannada BSI Bible 2016
ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಶಿಷ್ಯರು ಆತನಿಗೆ - ಜನರು ನಿನ್ನನ್ನು ನೂಕುವದನ್ನು ಕಂಡೂ ಕಂಡು ನನ್ನನ್ನು ಯಾರು ಮುಟ್ಟಿದರೆಂದು ಕೇಳುತ್ತೀಯಲ್ಲಾ ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.