Mark 5:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
Kannada BSI Bible 2016
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೆಂಗಸು ತನಗಾದದ್ದನ್ನು ತಿಳುಕೊಂಡು ಅಂಜಿ ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ಇದ್ದ ಸಂಗತಿಯನ್ನೆಲ್ಲಾ ಹೇಳಿದಳು.
Kannada Bible (KNCL) BSI 2016
ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.