Mark 5:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
Kannada BSI Bible 2016
ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು - ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವದು? ಅಂದರು.
Kannada Bible (KNCL) BSI 2016
ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.