Mark 5:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸು ಅವರ ಮಾತನ್ನು ಗಣನೆಗೆ ತಂದುಕೊಳ್ಳದೆ, ಸಭಾಮಂದಿರದ ಅಧಿಕಾರಿಗೆ, “ಹೆದರಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
Kannada BSI Bible 2016
ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಡಿದ ಮಾತನ್ನು ಯೇಸು ಲಕ್ಷ್ಯಮಾಡದೆ ಸಭಾಮಂದಿರದ ಅಧಿಕಾರಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ ಎಂದು ಹೇಳಿದನು.
Kannada Bible (KNCL) BSI 2016
ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.