Mark 5:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
Kannada BSI Bible 2016
ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ.
Kannada Bible (KNCL) BSI 2016
ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.