Mark 5:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
Kannada BSI Bible 2016
ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಆತನು ಗದ್ದಲವನ್ನೂ ಕೆಲವರು ಬಹಳವಾಗಿ ಅಳುವದನ್ನೂ ಗೋಳಾಡುವದನ್ನೂ ಕಂಡನು.
Kannada Bible (KNCL) BSI 2016
ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.