Mark 5:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
Kannada BSI Bible 2016
ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಒಳಕ್ಕೆ ಹೋಗಿ - ನೀವು ಗದ್ದಲ ಮಾಡುವದೂ ಅಳುವದೂ ಯಾಕೆ? ಹುಡುಗಿ ಸತ್ತಿಲ್ಲ;
Kannada Bible (KNCL) BSI 2016
ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.