Mark 5:4 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಅನೇಕ ಸಾರಿ ಅವನ ಕೈ ಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದರು. ಆದರೆ ಅವನು ಅವುಗಳನ್ನೆಲ್ಲ ಕಿತ್ತೊಗೆದುಬಿಟ್ಟನು. ಅವನನ್ನು ಹತೋಟಿಗೆ ತರುವ ಬಲಿಷ್ಠನು ಅಲ್ಲಿ ಯಾರೂ ಇರಲಿಲ್ಲ.
Kannada BSI Bible 2016
ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
Kannada Bible (KNCL) BSI 2016
ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.