Mark 5:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
Kannada BSI Bible 2016
ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರಕೊಂಡು ಹೋಗಿ ಅವಳ ಕೈಹಿಡಿದು -
Kannada Bible (KNCL) BSI 2016
ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.