Mark 5:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, \tl “ತಲಿಥಾ ಕೂಮ್!”\tl* ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
Kannada BSI Bible 2016
ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.
Kannada Bible (KNCL) BSI 2016
ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.