Mark 5:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, ‘ಆ ಬಾಲಕಿಗೆ ಊಟ ಮಾಡಿಸಿರಿ’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
Kannada BSI Bible 2016
ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬಹಳ ಆಶ್ಚರ್ಯದಿಂದ ಬೆರಗಾದರು. ಆಮೇಲೆ ಆತನು ಅವರಿಗೆ - ಇದು ಯಾರಿಗೂ ತಿಳಿಯಬಾರದೆಂದು ಬಹು ಖಂಡಿತವಾಗಿ ಹೇಳಿ ಆ ಹುಡುಗಿಗೆ ಊಟಮಾಡಿಸಿರಿ ಅಂದನು.
Kannada Bible (KNCL) BSI 2016
ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.