Mark 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು. (Verses 7-8)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
Kannada BSI Bible 2016
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.
Kannada Bible (KNCL) BSI 2016
“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.