Mark 6:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.
Kannada BSI Bible 2016
ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.
Kannada Bible (KNCL) BSI 2016
ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.