Mark 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
Kannada BSI Bible 2016
ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು - ಇವನು ಎಲೀಯನೆಂತಲೂ ಕೆಲವರು - ಇವನು ಹಿಂದಿನ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ ಹೇಳಿದರು.
Kannada Bible (KNCL) BSI 2016
ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು.