Mark 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
Kannada BSI Bible 2016
ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು.
Kannada Bible (KNCL) BSI 2016
ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.